|
|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪ್ರಕಾಶಕರು |
: |
ಅಭಿನವ, Abhinava |
ಈಗಿನ ಮುದ್ರಣದ ಸಂಖ್ಯೆ |
: |
1 |
ಮುದ್ರಣದ ವರ್ಷ |
: |
2008 |
ರಕ್ಷಾ ಪುಟ |
: |
ಸಾದಾ |
ಪುಟಗಳು |
: |
184 |
ಪುಸ್ತಕದ ಗಾತ್ರ |
: |
1/8 Demy Size |
ಕೋಡ್ |
: |
161949 |
ಪ್ರೌಢ ಓದುಗ ಅಥವ ಸಂದರ್ಶಕ ಸೋಮನಾಥಪುರದ ಬಗ್ಗೆ ತಿಳಿದುಕೊಳ್ಳಲು ಬೇಕಾದ ಮಾಹಿತಿಗಳನ್ನು ಒದಗಿಸುವುದು ಈ ಗ್ರಂಥದ ಉದ್ದೇಶ. ಹೊಯ್ಸಳರ ಮತ್ತು ಅವರ ದೇವಾಲಯಗಳ ಪ್ರಸ್ತಾವನೆಯಿಂದ ಪ್ರಾರಂಭವಾಗಿ, ಇಲ್ಲಿಯ ದೇವಾಲಯಗಳ ಇತಿಹಾಸ, ಐತಿಹ್ಯ, ಪೋಷಕ, ವಾಸ್ತು೦ಶಿಲ್ಪಿ ಮುಂತಾದವನ್ನು ಚರ್ಚಿಸುತ್ತಾ ಒದಗಿಸಿಕೊಡಲಾಗಿದೆ. ಅಲ್ಲದೆ, ಪ್ರಧಾನ ದೇವತೆಗಳ ಪಾಕಶಾಲೆ, ವಸ್ತ್ರಾಭರಣ ಭಂಡಾರ ಮತ್ತು ಮನರಂಜಕ ಬಳಗಗಳ ಬಗ್ಗೆ ಒಳನೋಟವನ್ನು ಕೊಡಲಾಗಿದೆ. ಎಂಬತ್ತೆರಡು ಸುಂದರ ವರ್ಣಚಿತ್ರ ಮತ್ತು ಬಾಹ್ಯಾಕಾಶಾನೌಕೆಗಳಿಂದ ಪಡೆದ ಅಪೂರ್ವ ದೃಶ್ಯಗಳ ಸಹಾಯದಿಂದ ಸೋಮನಾಥಪುರದ ಗತ ಇತಿಹಾಸವನ್ನು ಮತ್ತು ಪ್ರಸ್ತುತ ಪರಿಸ್ಥಿತಿಯನ್ನು ತೆರೆದಿಟ್ಟಿರುವುದು ಇಲ್ಲಿಯ ವಿಶೇಷತೆ.
|
ಪ್ರೊ. ಷ. ಶೆಟ್ಟರ್ ಅವರು ಜನಿಸಿದ್ದು ೧೯೩೫ ನೇ ಇಸವಿಯಲ್ಲಿ. ಮೈಸೂರು, ಧಾರವಾಡ ಮತ್ತು ಕೇಂಬ್ರಿಜ್ ನಲ್ಲಿ ಉನ್ನತ ವ್ಯಾಸಂಗ ಪಡೆದ ಇವರು ಇತಿಹಾಸ, ಪ್ರಾಕ್ತನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ದರ್ಶನಶಾಸ್ತ್ರ ಮತ್ತು ಹಳೆಗನ್ನಡ ಕಾವ್ಯ ಕುರಿತು ಸುಮಾರು ೨೭ ಸಂಶೋಧನಾ ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರಕುವಲ್ಲಿ ಇವರ ಸಂಶೋಧನೆಗಳ ಕೊಡುಗೆ ಬಹಳ ಇದೆ.
ಶ್ರೀಯುತರು ದೇಶ-ವಿದೇಶಗಳಲ್ಲಿ ಮನ್ನಣೆ ಪಡೆದಿರುತ್ತಾರೆ. ಕೇಂಬ್ರಿಜ್, ಹಾರ್ವರ್ಡ್, ಹೈಡಲ್ ಬರ್ಗ್, ಅಥೆನ್ಸ್, ಲೈಡನ್, ಮಾಸ್ಕೋ ವಿಶ್ವವಿದ್ಯಾನಿಲಯಗಳಲ್ಲಿ ಕೆಲಕಾಲ ಸಂದರ್ಶಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಹಲವಾರು ರಾಜ್ಯ ಹಾಗು ರಾಷ್ಟ್ರ ಪ್ರಶಸ್ತಿಗಳು ಇವರಿಗೆ ಸಂದಿವೆ. ಇವರು ಭಾರತೀಯ ಇತಿಹಾಸ ಅನುಸಂಧಾನ ಪರಿಷತ್, ದಕ್ಷಿಣ ಭಾರತೀಯ ಇತಿಹಾಸ ಅನುಸಂಧಾನ ಪರಿಷತ್ ಹಾಗು ಕರ್ನಾಟಕ ಇತಿಹಾಸ ಅನುಸಂಧಾನ ಪರಿಷತ್ ಗಳ ಸರ್ವಾಧ್ಯಕ್ಷ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಅಲ್ಲದೇ ಆಸ್ಟ್ರೇಲಿಯಾದ ಮೆಲ್ಬೋರ್ನ್ ನಲ್ಲಿ ನಡೆದ ವಿಶ್ವಸಂಸ್ಕೃತ ಸಮ್ಮೇಳನದ ವಿಭಾಗೀಯ ಅಧ್ಯಕ್ಷ ಸ್ಥಾನದ ಗೌರವವನ್ನೂ ಇವರು ಪಡೆದಿದ್ದಾರೆ.
೧೯೬೦-೯೬: ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಬೋಧನೆ
೧೯೭೮-೯೫: ಭಾರತೀಯ ಕಲಾ ಇತಿಹಾಸ ಸಂಸ್ಥೆಯ ನಿರ್ದೇಶಕತ್ವ
೧೯೯೬-೯೯: ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಹಿಸ್ಟಾರಿಕಲ್ ರಿಸರ್ಚ್ ಅಧ್ಯಕ್ಷ ಸ್ಥಾನ
೨೦೦೨-೧೦: ಬೆಂಗಳೂರಿನ ನ್ಯಾಷನಲ್ ಇನ್ಸಿಟಿಟ್ಯೂಟ್ ಆಫ್ ಅಡ್ವಾನ್ಸಡ್ ಸ್ಟಡೀಸ್ ನಲ್ಲಿ ಡಾ. ಎಸ್. ರಾಧಾಕೃಷ್ಣನ್ ಪ್ರಾಧ್ಯಾಪಕತ್ವ ಹಾಗು ೨೦೧೦ ರಿಂದ ಇದೇ ಸಂಸ್ಥೆಯಲ್ಲಿ ಎಮೆರಿಟಸ್ ಪ್ರಾಧ್ಯಾಪಕ ಸ್ಥಾನ[೧]
೨೦೦೫ ರಿಂದ ಇಂದಿರಾ ಗಾಂಧಿ ರಾಷ್ಟ್ರೀಯ ಕಲಾಕೇಂದ್ರ ದಕ್ಷಿಣ ಭಾರತ ಶಾಖೆಯ ಗೌರವ ನಿರ್ದೇಶಕತ್ವ[೨].
|
|
| |
|
|
|
|
|
|
|
|
|